LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್  ನಿರ್ದೇಶಕರಾಗಿ ವಿನಾಯಕ ಪತ್ತಾರ ಅವಿರೋಧ ಆಯ್ಕೆ

ವಿಜಯಪುರ : ವಿಜಯಪುರದ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್  ಹಿಂದುಳಿದ ವರ್ಗ (ಅ) ನಿರ್ದೇಶಕ ಸ್ಥಾನಕ್ಕೆ ವಿನಾಯಕ ಬಸವರಾಜ ಪತ್ತಾರ ಅವರು ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ ಅವರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಪ್ರತಿಷ್ಠಿತ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಸೇವೆ ಮಾಡುವ ಅವಕಾಶ ಕಲ್ಪಿಸಿದ್ದಕ್ಕೆ ನಾನು ಚಿರ ಋಣಿ, ಎಲ್ಲ ನಿರ್ದೇಶಕರ, ಗ್ರಾಹಕರ, ಸಿಬ್ಬಂದಿಗಳ ಸಹಾಯ ಸಹಕಾರದೊಂದಿಗೆ ನನಗೆ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ, ‌ಬ್ಯಾಂಕಿನ ಪ್ರಗತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ವಿನಾಯಕ ಪತ್ತಾರ ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಸಹಕಾರ ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ, ಉಪಾಧ್ಯಕ್ಷ ವಿಕಾಸ ಪದಕಿ, ನಿರ್ದೇಶಕರಾದ ವಿಜಯ ಜೋಶಿ, , ಕೃಷ್ಣಾ ಗುನ್ನಾಳಕರ,ಗೋವಿಂದ ಜೋಶಿ ಶಂಕರ ಕುಲಕರ್ಣಿ, ಪವನ ಕುಲಕರ್ಣಿ, ವೀಣಾ ಟಂಕಸಾಲಿ, ರಾಧಾ ತಾವರಗೇರಿ, ಸಚೀನ್ ಮದ್ದಿಮಠ, ವಿಶ್ವನಾಥ ತಳವಾರ, ಪವನ ಮುರಾಳ, ಅಶೋಕ ಉಪಾಧ್ಯೆವ್ಯವಸ್ಥಾಪಕರಾದ ಪದ್ಮಾವತಿ ಕುಲಕರ್ಣಿ, ಕಲ್ಯಾಣಿ ಸಂಗಮ, ಕೃಷ್ಣಾ ಜೋಶಿ, ಮಾಜಿ ನಿರ್ದೇಶಕರು, ಸಿಬ್ಬಂದಿ ಮೊದಲಾದವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್