LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನೀತಿ ಸಂಹಿತೆ ಉಲ್ಲಂಘನೆ : ೧೦೬ ಪ್ರಕರಣ ದಾಖಲು


ಬಾಗಲಕೋಟೆ : ಮಾರ್ಚ ೩೧ (ಕರ್ನಾಟಕ ವಾರ್ತೆ) : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೆ ಒಟ್ಟು ೧೧೫ ಅಬಕಾರಿ ದಾಳಿಗಳನ್ನು ಜರುಗಿಸಿ ೧೦೬ ಪ್ರಕರಣಗಳನ್ನು ದಾಖಲಿ, ೯೨ ಜನ ಆರೋಪಿಗಳನ್ನು ಬಂಧಿಸಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಪ್ರಕರಣಗಳಲ್ಲಿ ೨೯೫.೫೫೦ ಲೀಟ ಮಧ್ಯ, ೧೬.೫೦೦ ಲೀಟರ ಗೋವಾ ರಾಜ್ಯದ ಮದ್ಯ, ೧೧೩೨೬.೫೦೦ ಲೀ ಬಿಯರ್, ೫೦ ಲೀ ಕಳ್ಳಬಟ್ಟಿ ಸಾರಾಯಿ, ೫೦೦ ಲೀ ಕೊಳೆ, ೫ ದ್ವಿಚಕ್ರವಾಹನ, ೨ ಕಾರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವರುಗಳ ಅಂದಾಜು ಒಟ್ಟು ಮೌಲ್ಯ ರೂ.೪೧.೮೭ ಲಕ್ಷ ಗಳಾಗಿದೆ.

ಈ ಪ್ರಕ್ರಿಯೆಯು ನಿರಂತರವಾಗಿದ್ದು, ಜಿಲ್ಲೆಯ ಯಾವುದೇ ಸ್ಥಳದಲ್ಲಿ ಅಬಕಾರಿ ಅಕ್ರಮಗಳು ಕಂಡುಬಂದಲ್ಲಿ ಆಯಾ ಕಾರ್ಯವ್ಯಾಪ್ತಿಯ ಅಬಕಾರಿ ಅಧಿಕಾರಿಗಳ ಸಂಚಾರಿ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿರುವಂತಹ ವ್ಯಕ್ತಿಗಳ ವಿವರವನ್ನು ಗೌಪ್ಯವಾಗಿಡುವದಲ್ಲದೇ ಸರ್ಕಾರದಿಂದ ದೊರೆಯುವಂತಹ ರಹಸ್ಯ ಸೇವಾನಿಧಿಯನ್ನು ಸಹ ಗೌಪ್ಯತೆಯ ಮೂಲಕ ಪಾವತಿಸಲಾಗುವುದೆಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್