LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಠಲ ಗಲಗಲಿಯವರ ಶೈಕ್ಷಣಿಕ ಸೇವೆ ಶ್ಲಾಘನೀಯ : ಶಶಿಕಾಂತ್ ಗುರೂಜಿ







ರಾಯಬಾಗ: ಸ್ವಾಮಿ ವಿವೇಕಾನಂದ ಹಾಗೂ ಸಂಗೋಳ್ಳಿ ರಾಯಣ್ಣರಂತ ಮಹಾನ ವ್ಯಕ್ತಿಗಳ ಆದರ್ಶ ತತ್ವಗಳು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಬೇಕೆಂದು ರೈತ ಹೋರಾಟಗಾರ ಶಶಿಕಾಂತ್ ಗುರೂಜಿ ಹೇಳಿದರು.

ಶುಕ್ರವಾರ ಸಾಯಂಕಾಲ ತಾಲೂಕಿನ ಹಿಡಕಲ್ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಅಜ್ಞಾನದ ಕತ್ತಲೆ ಹೋಗಲಾಡಿಸಿ ಸುಜ್ಞಾನದ ಮಹಾ ಬೆಳಕನ್ನು ಹಚ್ಚಬೇಕೆಂದರು.

 ಹಾರೂಗೇರಿಯ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಸಾಹಿತಿ ಟಿ.ಎಸ್.ವಂಟಗೂಡಿ ಮಾತನಾಡಿ, 10 ದೇವಾಲಯಗಳನ್ನು ನಿರ್ಮಿಸುವುದಕ್ಕಿಂತ ಒಂದು ಮುತ್ತಿನಂತಹ ಶಿಕ್ಷಣ ಸಂಸ್ಥೆಯನ್ನು ಹುಟ್ಟು ಹಾಕಿ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣರಾದ ಶಿಕ್ಷಣ ಪ್ರೇಮಿ, ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ವಿಠಲ ಗಲಗಲಿಯವರ ಶೈಕ್ಷಣಿಕ ಸೇವೆ ಶ್ಲಾಘನೀಯವಾಗಿದೆ, ವಿದ್ಯಾರ್ಥಿಗಳು ಸತತ ಪ್ರಯತ್ನ, ಏಕಾಗ್ರತೆ, ಸಮಯಪ್ರಜ್ಞೆ ಅಳವಡಿಸಿಕೊಂಡು ಸಾಧನೆ ಮಾಡಿದರೆ ಬದುಕು ಸಾರ್ಥಕವಾಗುತ್ತದೆ ಎಂದರು.

 ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಗಲಗಲಿ  ವಹಿಸಿದ್ದರು.

 ಹಾರೂಗೇರಿಯ ಯುನಿವರ್ಸಲ್ ಮಹಾವಿದ್ಯಾಲಯದ ಪ್ರಾಚಾರ್ಯ ಲಕ್ಷ್ಮಣ ಪಾಟೀಲ, ವಾಸುದೇವ ಗಲಗಲಿ, ಪುಂಡಲಿಕ ಕುಳ್ಳೊಳ್ಳಿ, ಸಚಿನ ಘಂಟಿ, ಮಹಾದೇವ ಗಾಣಿಗೇರ, ಚೇತನ ಪೂಜಾರಿ, ಜೊತೆಪ್ಪ ಎತ್ತಿನಮನಿ, ಶಿವಾನಂದ ವಡ್ಡರ, ಪ್ರಭು ಸಣ್ಣಕ್ಕಿನವರ, ದಯಾನಂದ ಕೊಕಟನೂರ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಇದ್ದರು.

 ಶಿಕ್ಷಕಿ ಲಕ್ಷ್ಮಿ ಕ್ಯಾತಪ್ಪಗೋಳ ಸ್ವಾಗತಿಸಿದರು, ಭವಾನಿ ಗಲಗಲಿ ನಿರೂಪಿಸಿದರು, ಅಶ್ವಿನಿ ಕುರಾಡಿ ವಂದಿಸಿದರು.

ಫೋಟೊ: 28 ರಾಯಬಾಗ 2

ಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ಹಿಡಕಲ್ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ರೈತ ಹೋರಾಟಗಾರ ಶಶಿಕಾಂತ್ ಗುರೂಜಿ ಅವರನ್ನು ಗಣ್ಯರು ಸತ್ಕರಿಸುತ್ತಿರುವುದು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್