LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿವಿದೆಡೆ ಡಿಸಿ ಭೇಟಿ ಎಸ್.ಐ.ಆರ್ ಪ್ರಗತಿ ಪರಿಶೀಲನೆ

ಬಾಗಲಕೋಟೆ, ಜುಲೈ ೦೪ : ಜಿಲ್ಲೆಯ ಹುನಗುಂದ, ಇಲಕಲ್ಲ ಹಾಗೂ ಅಮೀನಗಡ ಪಟ್ಟಣದ ಮನೆ ಮನೆಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಶನಿವಾರ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು. 
ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಮತದಾರರಿಗೆ ಎನ್ಯೂಮಿನೇಷನ್ ಫಾರಂ ವಿತರಿಸುತ್ತಿರುವುದು, ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿರುವುದು ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ವಿಧಾನವನ್ನು ಅವಲೋಕಿಸಿದರು. ಮತದಾರರಿಗೆ ಎಸ್.ಐ.ಆರ್ ಕುರಿತು ಸಮರ್ಪಕ ಮಾಹಿತಿ ನೀಡಿ ಅರ್ಹ ಪ್ರತಿಯೊಬ್ಬ ಮತದಾರರ ವಿವರಗಳನ್ನು ನಿಖರವಾಗಿ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದ ಹಿನ್ನಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಎಸ್.ಐ.ಆರ್ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. 
ಹುನಗುಂದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಕಲ್ಪಿಸಲಾಗುತ್ತಿರುವ ಮೂಲಸೌಕರ್ಯ ಹಾಗೂ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ, ಸ್ವಚ್ಛತೆ, ಆರೋಗ್ಯ ಮತ್ತು ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವಿಶೇಷ ಗಮನ ಹರಿಸಬೇಕು. ಲೋಪ ಕಂಡುಬಂದಲ್ಲಿ ಕೂಡಲೇ ಸರಿಪಡಿಸುವ ಕೆಲಸವಾಗಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹುನಗುಂದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕಚೇರಿ ಕಾರ್ಯವೈಖರಿ, ಸಾರ್ವಜನಿಕ ಸೇವೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿದರು. ಕಂದಾಯ ಇಲಾಖೆಯ ವಿವಿಧ ದಾಖಲೆಗಳು, ಅರ್ಜಿಗಳ ವಿಲೇವಾರಿ, ಪಹಣಿ, ಇ-ಖಾತೆ, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳ ವಿತರಣೆಯ ಪ್ರಗತಿ ಹಾಗೂ ದೂರುಗಳ ನಿರ್ವಹಣೆ ಸೇರಿದಂತೆ ಸಾರ್ವಜನಿಕರ ಸೇವೆಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು. 
ಸಾರ್ವಜನಿಕರು ಕಚೇರಿಗೆ ಬಂದಾಗ ಯಾವುದೇ ತೊಂದರೆಯಾಗದಂತೆ ಸುಗಮ ಸೇವೆ ಒದಗಿಸುವದರ ಜೊತೆಗೆ ಅವರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಜನಸ್ನೇಹಿ ಆಡಳಿತ ನೀಡಬೇಕು ಎಂದರು. ಭೇಟಿ ವೇಳೆಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಇಲಕಲ್ಲ ತಹಶೀಲ್ದಾರ ಅಮರೇಶ ಪಮ್ಮಾರ, ಹುನಗುಂದ ಗ್ರೇಡ್-೨ ತಹಶೀಲ್ದಾರ ಮಹೇಶ ಸಂದಿಗವಾಡ, ಭೂತ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಸೇರಿದಂತೆ ಇತರರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್