LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿ.ಎಸ್.ಕೆ ವಿವಿ ಹಾಸ್ಟೆಲ್ ಸಮಸ್ಯೆಗಳ ನಿವಾರಣೆಯ ಭರವಸೆ

ಬಳ್ಳಾರಿ, ಮೇ.20.: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಸ್ಸಿ/ಎಸ್ಟಿ ವಸತಿ ನಿಲಯಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಖಂಡಿಸಿ, ಎಐಡಿಎಸಓ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯ ಮುಂದೆ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ನಿನ್ನೆ ಶನಿವಾರದಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ರಾಜೇಶ್ವರಿ ಮೇಡಂ ಅವರು ಭೇಟಿ ನೀಡಿ, ಎಸ್ಸಿ/ಎಸ್ಟಿ ವಸತಿ ನಿಲಯಗಳ ಕಳಪೆ ಗುಣಮಟ್ಟದ ಆಹಾರ, ನೈರ್ಮಲ್ಯ ಇಲ್ಲದಿರುವುದು ಹಾಗೂ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಆಗಿರುವ ಬದಲಾವಣೆಗಳು ಮತ್ತು ಚರ್ಮದ ಸಮಸ್ಯೆಗಳನ್ನು ಗಮನಿಸಿ, ನೀರಿನ ಶುಚಿತ್ವ ಇಲ್ಲದಿರುವುದನ್ನು ಗಮನಿಸಿದರು.
ಹಾಗೂ ವಿಶ್ವವಿದ್ಯಾನಿಲಯದ ಎಸ್ಸಿ/ಎಸ್ಟಿ ವಸತಿ ನಿಲಯಗಳ ನಿರ್ವಹಣೆಯನ್ನು ಸಮಾಜ ಕಲ್ಯಾಣ ಇಲಾಖೆಗೆ ವಹಿಸುವ ಕುರಿತು ಹಾಗೂ ಸಮಸ್ಯೆಗಳ ನಿವಾರಣೆಯ ಕುರಿತು ಮಂಗಳವಾರ ದಿನಾಂಕ 19 ಮೇ 2026 ರಂದು ವಸತಿ ನಿಲಯಪಾಲಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವುದಾಗಿ ಆಶ್ವಾಸನೆ ನೀಡಿದರು. ಹಾಸ್ಟೆಲ್ಗಳಲ್ಲಿ ಇರುವ 400 ವಿದ್ಯಾರ್ಥಿಗಳು ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಮನವಿ ಪತ್ರ ಕೊಟ್ಟು ಕೇಳಿಕೊಂಡರು.
ಹಾಸ್ಟೆಲಿಗೆ ಭೇಟಿ ಕೊಟ್ಟಾಗ ವಿವಿಯ ವಿದ್ಯಾರ್ಥಿಗಳಾದ ನಿಹಾರಿಕಾ ಆರ್., ಅರುಣ್ ಭಗತ್, ಭಾಗ್ಯ ಬಾಯಿ, ಮಂಜುನಾಥ, ಹನುಮೇಶ ಬನ್ನಿಕೊಪ್ಪ, ಬಾರೇಶ್, ವಿನಯ್ ಕುಮಾರ್, ಮಹೇಶ್ ನಾಯಕ ಮುಂತಾದವರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್