LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾಂಸ್ಕ್ರತಿಕ ಕಾರ್ಯಕ್ರಮಗಳು ವೀಕ್ಷಿಸುವುದು ಮನಸ್ಸಿಗೆ ನೆಮ್ಮದಿ:ಪಿ ಗಾದೆಪ್ಪ

ಬಳ್ಳಾರಿ, ಮೇ.18:  ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ಆಲಾಪ್ ಸಂಗೀತ ಕಲಾಟ್ರಸ್ಟ್ ಬಳ್ಳಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ವಿಶೇಷ ಘಟಕ ಯೋಜನೆ ಅಡಿಯಲ್ಲಿ "ಸಾಂಸ್ಕೃತಿಕ ಕಲಾ ವೈಭವ" ಎನ್ನುವ ಕಾರ್ಯಕ್ರಮವನ್ನು ಬಳ್ಳಾರಿಯ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರ ಪಿ. ಗಾದೆಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಇವತ್ತಿನ ದಿನಮಾನದಲ್ಲಿ ಕಲೆ,ಸಾಹಿತ್ಯ,ಸಂಸ್ಕೃತಿಗೆ ಬಳ್ಳಾರಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಅದಕ್ಕೆ ಕಾರಣ ಟಿವಿ ಮತ್ತು ಮೊಬೈಲ್ ಗಳ ಹಾವಳಿ ಆದರೂ ಕೂಡ ಈ ಕಾರ್ಯಕ್ರಮಕ್ಕೆ ಇಷ್ಟು ಜನ ಸೇರಿರುವುದು ತುಂಬಾ ಸಂತೋಷವಾಗುತ್ತಿದೆ ಎಂದು ತಿಳಿಸಿ ಆಲಾಪ್ ಸಂಗೀತ ಕಲಾಟ್ರಸ್ಟ್ ಹಾಗೂ ಕನ್ನಡ ಮತ್ತು ಇಲಾಖೆ ಅಡಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವುದಕ್ಕೆ ಧನ್ಯವಾದಗಳು ತಿಳಿಸಿದರು, ಮುಖ್ಯ ಅತಿಥಿಗಳಾಗಿ ಶಿವಲಿಂಗಪ್ಪ ಹಂದಿಹಾಳ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು,
 ಬಿ.ಕುಬೇರಪ್ಪ,
ಲೇಖಕರು, ಅಧೀಕ್ಷಕರು ತಾರನಾಥ ಸರ್ಕಾರಿ ಆಯುರ್ವೇದ ಆಸ್ಪತ್ರೆ ಬಳ್ಳಾರಿ, ಡಾ. ಕೆ ಹನುಮಂತಪ್ಪ 
ರಾಜ್ಯ ಗೌರವಾಧ್ಯಕ್ಷರು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ,ಬೆಂಗಳೂರು ಸಿದ್ದರಾಮಕಲ್ಮಠ 
ಮಾಜಿ ಅಧ್ಯಕ್ಷರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಳ್ಳಾರಿ, ಶ್ರೀಮತಿ ನೇತ್ರಾವತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ, ಮುದ್ದಟನೂರು ತಿಪ್ಪೇಸ್ವಾಮಿ  ಕಾರ್ಯದರ್ಶಿಗಳು ಬಳ್ಳಾರಿ ಜಿಲ್ಲಾ ಕಲಾವಿದರ ಸಂಘ ಇನ್ನು ಮುಂತಾದವರು ಪಾಲ್ಗೊಂಡಿದ್ದರು. ಆಲಾಪ್ ಸಂಗೀತ ಕಲಾಟ್ರಸ್ಟ್ ನ ಅಧ್ಯಕ್ಷರಾದ ಶ್ರೀ  ರಮಣಪ್ಪ ಭಜಂತ್ರಿ ನವರು ವೇದಿಕೆ ಮೇಲಿರುವ ಗಣ್ಯರನ್ನು ಸ್ವಾಗತಿಸುತ್ತ ಸುಮಾರು ಹತ್ತು ವರ್ಷಗಳಿಂದ ನಮ್ಮ ಸಂಸ್ಥೆ ವತಿಯಿಂದ ಬಳ್ಳಾರಿ ನಗರವಲ್ಲದೇ ಅನೇಕ ಕಡೆ ಸಾಂಸ್ಕೃತಿಕ  ಕಾರ್ಯಕ್ರಮವನ್ನು ಆಯೋಜಿಸುತ್ತ  ಬಂದಿದ್ದೇವೆ ಎಂದು ಪ್ರಾಸ್ತಾವಿಕ ನುಡಿಯಲ್ಲಿ ತಿಳಿಸಿದರು. ವೇದಿಕೆಯ ಕಾರ್ಯಕ್ರಮದ ನಂತರ ಸುಗಮ ಸಂಗೀತ-ಜಡೇಶ ಎಮ್ಮಿಗನೂರು 
 ಕಲಾತಂಡ, ಜಾನಪದ ನೃತ್ಯ-ಅಭಿನಯ ಮತ್ತು ತಂಡ 
ತೊಗಲುಗೊಂಬೆ ಪ್ರದರ್ಶನ- ಶ್ರೀಮತಿ ಹುಲಿಗೆಮ್ಮ ಮತ್ತು ತಂಡ ಬಯಲಾಟ-ಭೀಮೇಶ್ ಸಿರಿಗೇರಿ ಇವರ ತಂಡದಿಂದ ಅದ್ಯುತವಾಗಿ ಸಾಂಸ್ಕೃತಿಕ ಕಾರ್ಯಕ್ರಗಳು ಮೂಡಿ ಬಂದವು.ಶ್ರೀ ಕೆ.ಜಿ. ಆಂಜನೇಯ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಕೂಡ್ಲಿಗಿ ಇವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್