LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಪ್ಪಗಲ್ಲು ರಸ್ತೆಯಲ್ಲಿ ನೀರು–ಚರಂಡಿ ಸಮಸ್ಯೆ ತೀವ್ರ: ನಿವಾಸಿಗಳ ಮನವಿ

ಬಳ್ಳಾರಿ ಏಪ್ರಿಲ್ 22: ನಗರದ ಸಮೀಪದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ ಕಪ್ಪಗಲ್ಲು ರಸ್ತೆ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಪ್ರದೇಶದಲ್ಲಿ ನಿತ್ಯಂ ಶಾಲೆವರೆಗೆ ಸುಮಾರು 23 ಲೇಔಟ್‌ಗಳು (ಕೃಷ್ಣ ಲೇಔಟ್, ಸದಾಶಿವನಗರ, ಆರ್ಚನಾ, ಅರ್ತಿತ, ನಾಯಿ ಸಾನ್ವಿ ಕೆ.ಬಿ.ಆರ್., ಬೃಂದಾವನ, ದೇವಸ್ ಕಾಲೋನಿ, ರಾಯಲ್ಸ್ ಥಾರ್ಟ್, ಮೇಘನಾ, ನೈರುತಿ ಬಡಾವಣೆ, ಕೋಟೇಶ್ ಬಡಾವಣೆ ಸೇರಿದಂತೆ) ಅಭಿವೃದ್ಧಿಯಾಗಿದ್ದು, ಸುಮಾರು 1150ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಅಲ್ಲದೆ, ಪ್ರಮುಖ ಶಿಕ್ಷಣ ಸಂಸ್ಥೆಗಳಾದ ನಿತ್ಯಂ ಶಾಲೆ, ಡೆಲ್ಲಿ ಪಬ್ಲಿಕ್ ಸ್ಕೂಲ್ ಹಾಗೂ ಶ್ರೀಮ್ಸ್ ಪಬ್ಲಿಕ್ ಶಾಲೆಗಳು ಈ ಭಾಗದಲ್ಲಿರುವುದರಿಂದ ವಿದ್ಯಾರ್ಥಿಗಳ ಸಂಚಾರವೂ ಹೆಚ್ಚಾಗಿದೆ.
ಆದರೆ, ಇಷ್ಟು ಜನಸಂಖ್ಯೆ ಇದ್ದರೂ ಈ ಪ್ರದೇಶದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಚರಂಡಿ ಸೌಲಭ್ಯಗಳಿಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ. ಮಳೆಯಾದಾಗ ರಸ್ತೆಗಳ ಮೇಲೆ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ನಿಂತ ನೀರಿನಿಂದ ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕುಡಿಯುವ ನೀರಿನ ಕೊರತೆಯಿಂದ ನಿವಾಸಿಗಳು ಹಾಗೂ ವಿದ್ಯಾರ್ಥಿಗಳು ಸುಮಾರು 4 ಕಿಲೋಮೀಟರ್ ದೂರದ ಕೊಳವೆ ಬಾವಿಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಅಲ್ಲಿ ದೊರೆಯುವ ನೀರಿನಲ್ಲಿ ಉಪ್ಪಿನಾಂಶ ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವುದಾಗಿ ದೂರಲಾಗಿದೆ.
ಇದಲ್ಲದೆ, ಸದಾಶಿವನಗರದಲ್ಲಿ ಸುಮಾರು ಮೂರು ವರ್ಷಗಳ ಹಿಂದೆ ನಿರ್ಮಿಸಿದ ನೀರಿನ ಟ್ಯಾಂಕ್ ಇನ್ನೂ ಬಳಕೆಗೆ ಬಂದಿಲ್ಲ. ಟ್ಯಾಂಕ್ ನಿರ್ಮಾಣವಾದರೂ ಸಂಪರ್ಕ (ಕನೆಕ್ಷನ್) ನೀಡದೇ ಇರುವುದರಿಂದ ಅದು ನಿರುಪಯುಕ್ತವಾಗಿಯೇ ಉಳಿದಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸ್ಥಳೀಯರು ಹಲವು ಬಾರಿ ಸಂಬಂಧಿತ ಅಧಿಕಾರಿಗಳಿಗೆ ಹಾಗೂ ಕಾರ್ಪೊರೇಷನ್‌ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ.
ತ್ವರಿತ ಕ್ರಮಕ್ಕೆ ಮನವಿ: ಸ್ಥಳೀಯರು ಅಧಿಕಾರಿಗಳಿಗೆ ಮನವಿ ಮಾಡಿದ್ದು—
ಶೀಘ್ರದಲ್ಲೇ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು
ಚರಂಡಿ ವ್ಯವಸ್ಥೆ ನಿರ್ಮಿಸಿ ಸಮಸ್ಯೆ ಪರಿಹರಿಸಬೇಕು
ರಸ್ತೆಗಳು ಸೇರಿದಂತೆ ಇತರ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು
ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್