LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೊಳಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಾಗೃತಿ ಜಾಥ



 ಬಳ್ಳಾರಿ.ಅ. 6 : ದೇಶಕ್ಕೆ ಸ್ವತಂತ್ರ ಬಂದು 78 ವರ್ಷ ಕಳೆದರೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಯಾಗಿಲ್ಲ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾಗಿರುವ ಕಲ್ಯಾಣ ಕರ್ನಾಟಕ ಸಂವಿಧಾನದ 98ನೇ ತಿದ್ದುಪಡಿ ಮೂಲಕ 2013ರಲ್ಲಿ 371 ಜೆ ವಿಶೇಷ ಸ್ಥಾನಮಾನ ದೊರೆತು 12 ವರ್ಷಗಳಲ್ಲಿ 25 ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿದ್ದರೂ ಸಹ ಅಭಿವೃದ್ಧಿ ಕೆಲಸಗಳಾಗಿಲ್ಲ ಈ ಭಾಗದ ಕಾರ್ಮಿಕರು ಕೆಲಸಕ್ಕಾಗಿ ಗುಳೆ ಹೋಗುವುದು ತಪ್ಪಿಲ್ಲ ವಿದ್ಯಾವಂತ ಯುವಕರಿಗೆ ಉದ್ಯೋಗ ಸಿಕ್ಕಿಲ್ಲ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರಗಳಿಲ್ಲ ಅಪೌಷ್ಟಿಕತೆಯಿಂದ ಬಾಣಂತಿಯರು ಮತ್ತು ಮಕ್ಕಳು ಸಾವುಗಳಾಗುತ್ತಿವೆ ಅನ್ನದಾತನ ಆತ್ಮಹತ್ಯೆಗಳಾಗುತ್ತಿವೆ ಹಿಂದುಳಿದ ಅಲ್ಪಸಂಖ್ಯಾತ ದಲಿತ ಆದಿವಾಸಿಗಳಿಗೆ ಇನ್ನೂ ಸಹ ಸಾಮಾಜಿಕ ನ್ಯಾಯ ದೊರಕಿಲ್ಲ ಸರ್ಕಾರ ಪ್ರತಿಬಾರಿ ಹೊಸ ಯೋಜನೆಗಳನ್ನು ಜಾರಿಗೆ ತಂದರು ದೊಡ್ಡ ಅನುದಾನಗಳನ್ನು ಘೋಷಣೆ ಮಾಡಿದರು

 ಸಹ ಅವುಗಳಿಂದ ಈ ಭಾಗಕ್ಕೆ ಏನೇನು ಪ್ರಯೋಜನವಾಗಿಲ್ಲ ಸರ್ಕಾರ ಈ ಭಾಗದ ಜನತೆಗೆ ಮೂಗಿಗೆ ತುಪ್ಪ ಸವರುವುದನ್ನು ಬಿಟ್ಟು ಸಮರ್ಪಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ತಾಹಿರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದರು.


 ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಕೊಪ್ಪಳ ರಾಯಚೂರು ಯಾದಗಿರಿ ಮತ್ತು ಕಲ್ಬುರ್ಗಿ ಜಿಲ್ಲೆಗಳು ಅತ್ಯಂತ ಹಿಂದುಳಿದ ಜಿಲ್ಲೆಗಳಾಗಿದ್ದು ಈ ಜಿಲ್ಲೆಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 9,000 ಶಿಶು ಮತ್ತು 600 ತಾಯಂದಿರು ಪೋಷಕಾಂಶಗಳ ಕೊರತೆಯಿಂದ ಅಸೂಲಿಗಿರುತ್ತಾರೆ 1963 ಆರೋಗ್ಯ ಕೇಂದ್ರಗಳ ಅವಶ್ಯಕತೆ ಇದ್ದು ಈಗ ಕೇವಲ 1519 ಕೇಂದ್ರಗಳಿವೆ  ಇವುಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು, ಖಾಲಿ ಇರುವ 80000 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು, ಅವಶ್ಯಕತೆ ಇರುವ ವಿದ್ಯಾರ್ಥಿ ನೆಲೆಗಳನ್ನು ಆರಂಭಿಸಬೇಕು ಮಾನವ ಅಭಿವೃದ್ಧಿ ಸೂಚ್ಯಂಕ ಮತ್ತು ತಲಾ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಈ ಪ್ರದೇಶವನ್ನು ಅಭಿವೃದ್ಧಿಗೊಳಿಸಬೇಕು ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಮಾಡಿಕೊಡಬೇಕು ಎಂಬ 11 ಅಂಶಗಳ ಬೇಡಿಕೆಯನ್ನು  ರಾಜ್ಯ ಸರ್ಕಾರದ ಮುಂದಿಟ್ಟು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಜಾತವನ್ನು ಹಮ್ಮಿಕೊಳ್ಳಲಾಗಿದೆ ಎಂದರು.


 ಈ ಪತ್ರಿಕಾಗೋಷ್ಠಿಯಲ್ಲಿ  ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಸೈಯದ್ ಅಮ್ಜದ್ ಹುಸೇನ್, ರಾಜ್ಯ ಉಪಾಧ್ಯಕ್ಷರಾದ ಶ್ರೀಕಾಂತ್ ಸಾಲಿಯಾನ್ ಸೈಯದ್ ಇರ್ಫಾನ್ ಸೇರಿದಂತೆ ಇತರರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್