LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಯಾವಾಗ?

ನವದೆಹಲಿ, ಜೂನ್ 13: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ಚುನಾವಣೆ ಕಾರಣಕ್ಕೆ ಫೆಬ್ರುವರಿ 1ರಂದು ಪೂರ್ಣಪ್ರಮಾಣದ ಬಜೆಟ್ ಬದಲು ಮಧ್ಯಂತರ ಬಜೆಟ್ ಮಂಡನೆ ಆಗಿತ್ತು.

ಈಗ 2024-25ರ ಹಣಕಾಸು ವರ್ಷಕ್ಕೆ ಹೊಸ ಸರ್ಕಾರದಿಂದ ಪೂರ್ಣಪ್ರಮಾಣದ ಬಜೆಟ್ ಮಂಡನೆ ಆಗಲಿದೆ. ನಿರ್ಮಲಾ ಸೀತಾರಾಮನ್ ಅವರೇ ಹಣಕಾಸು ಸಚಿವರಾಗಿ ಮುಂದುವರಿದಿದ್ದು, ಅವರಿಂದಲೇ ಬಜೆಟ್ ಮಂಡನೆ ಆಗಲಿದೆ. ಆದರೆ, ಜುಲೈನಲ್ಲಿ ಬಜೆಟ್  ಮಂಡಿಸಲಿರುವುದು ಖಚಿತವಾಗಿದ್ದರೂ ಯಾವ ದಿನ ಎಂದು ಇನ್ನೂ ನಿರ್ದಿಷ್ಟವಾಗಿಲ್ಲ.

ಎಎನ್​ಐ ಸುದ್ದಿಸಂಸ್ಥೆ ವರದಿ ಪ್ರಕಾರ ಜುಲೈ ಮೂರನೇ ವಾರದಲ್ಲಿ ಸಂಸತ್​ನಲ್ಲಿ ಬಜೆಟ್ ಪ್ರಸ್ತುತಪಡಿಸುವ ನಿರೀಕ್ಷೆ ಇದೆ. ಜುಲೈ 15ರಿಂದ 21ರ ವಾರದಲ್ಲಿ ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಮಂಡನೆ ಆಗಬಹುದು ಎನ್ನಲಾಗುತ್ತಿದೆ. ಸಾಮಾನ್ಯವಾಗಿ ಸಾರ್ವತ್ರಿಕ ಚುನಾವಣೆ ಆದ ಬಳಿಕ ಜುಲೈ ಮೊದಲ ಅಥವಾ ಎರಡನೇ ವಾರದೊಳಗೆ ಬಜೆಟ್ ಇರುತ್ತದೆ.

ಈ ಬಾರಿ ಸಾರ್ವತ್ರಿಕ ಚುನಾವಣೆ ನಡೆದದ್ದು 18ನೇ ಲೋಕಸಭೆಗೆ. ಜೂನ್ 24ಕ್ಕೆ ಹೊಸ ಲೋಕಸಭೆಯ ಮೊದಲ ಸೆಷನ್ ಆರಂಭವಾಗಲಿದೆ. ನೂತನ ಲೋಕಸಭಾ ಸದಸ್ಯರೆಲ್ಲರೂ ಈ ವೇಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಳಿಕ ಸ್ಪೀಕರ್ ಆಯ್ಕೆ ನಡೆಯುತ್ತದೆ. ಮೂರು ದಿನ ಕಾಲ ಈ ಪ್ರಕ್ರಿಯೆ ನಡೆಯುತ್ತದೆ.

ಜೂನ್ 27ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಮತ್ತು ಲೋಕಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜುಲೈ 3ರವರೆಗೂ ಈ ಅಧಿವೇಶನ ಮುಂದುವರಿಯಲಿದೆ. ಇದಾದ ಬಳಿಕ ಜುಲೈ ಮೂರನೇ ವಾರದಲ್ಲಿ ಎರಡೂ ಸದನಗಳು ಸೇರಲಿದ್ದು, ಆಗ ಬಜೆಟ್ ಮಂಡನೆ ಆಗಲಿದೆ.

ನಿರ್ಮಲಾ ಸೀತಾರಾಮನ್ 2019ರಿಂದಲೂ ಹಣಕಾಸು ಸಚಿವೆಯಾಗಿದ್ದಾರೆ. ಒಟ್ಟು ಆರು ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ಐದು ಪೂರ್ಣ ಪ್ರಮಾಣದ ಬಜೆಟ್, ಮತ್ತು ಒಂದು ಮಧ್ಯಂತರ ಬಜೆಟ್ ಸೇರಿದೆ. ಈ ಬಾರಿ ಮಂಡಿಸಿದರೆ ಸತತ ಏಳನೇ ಬಜೆಟ್ ಆಗುತ್ತದೆ. ಸತತ ಆರನೇ ಪೂರ್ಣಪ್ರಮಾಣ ಬಜೆಟ್ ಮಂಡನೆ ಮಾಡಿದಂತಾಗುತ್ತದೆ. ಸತತವಾಗಿ ಇಷ್ಟು ಸಂಖ್ಯೆಯಲ್ಲಿ ಹಿಂದೆ ಬೇರಾವ ಹಣಕಾಸು ಸಚಿವರು ಬಜೆಟ್ ಮಂಡಿಸಿದ್ದಿಲ್ಲ. ಮೊರಾರ್ಜಿ ದೇಸಾಯಿ ಆರು ಬಾರಿ ಬಜೆಟ್ ಮಂಡನೆ ಮಾಡಿದ್ದು ಈವರೆಗಿನ ದಾಖಲೆಯಾಗಿತ್ತು. ಈಗ ನಿರ್ಮಲಾ ಸೀತಾರಾಮನ್ ಈ ದಾಖಲೆ ಮುರಿಯಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ