LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೆಪಿಎಸ್ಸಿ ಕರ್ಮಕಾಂಡ ಬಗ್ಗೇಕೆ ರಾಹುಲ್ ಗಾಂಧಿ ಧ್ವನಿ ಅಡಗಿಸಿದ್ದಾರೆ?

ಹಸಿರು ಕ್ರಾಂತಿ ವರದಿ ನವದೆಹಲಿ
ನೀಟ್ ಬಗ್ಗೆ ಧ್ವನಿ ಎತ್ತುತ್ತಿರುವ ರಾಹುಲ್ ಗಾಂಧಿ ಕರ್ನಾಟಕದ ಕೆಪಿಎಸ್ಸಿ ಕರ್ಮಕಾಂಡ ಬಗ್ಗೆ ಏಕೆ ಧ್ವನಿ ಅಡಗಿಸಿದ್ದಾರೆ? ಇದೆಂಥ ದ್ವಿಮುಖ ನೀತಿ? ಇಂಥಾ ಸೋಗು? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.

ದೆಹಲಿಯಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷಗಳು ರಾಷ್ಟ್ರೀಯ ಪರೀಕ್ಷೆ ವಿಷಯದಲ್ಲಿ ರಾಜಕೀಯ ಮಾಡುತ್ತಿವೆ. ವಿಪಕ್ಷಗಳು ರಾಜಕೀಯ ಬದಿಗೊತ್ತಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಎಲ್ಲರೂ ಒಟ್ಟಾಗಿ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.

ನೀಟ್ ವಿವಾದ ಕುರಿತು ಸಂಸತ್ತಿನಲ್ಲಿ ಮುಕ್ತ ಹಾಗೂ ಸತ್ಯಾಧಾರಿತ ಚರ್ಚೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ಇದಕ್ಕೆ ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿಪಕ್ಷ ನಾಯಕರೂ ಸಮ್ಮತಿಸಿದ್ದಾರೆ. ಆದರೆ, ಒಬ್ಬರ ಅಹಂಕಾರದಿಂದಾಗಿ ಚರ್ಚೆ ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ಕೆಪಿಎಸ್ಸಿ ಹಗರಣ ಬಗೆಗೇಕೆ ಚಕಾರವಿಲ್ಲ: 
ಕೇಂದ್ರದಲ್ಲಿ ಇಷ್ಟೊಂದು ರಾದ್ಧಾಂತ ಮಾಡುವ ವಿಪಕ್ಷ ನಾಯಕ ರಾಹುಲ್ ಗಾಂಧಿ, ತಮ್ಮದೇ ಆಡಳಿತವಿರುವ ಕರ್ನಾಟಕದಲ್ಲಿ ಕೆಪಿಎಸ್ಸಿ ಕರ್ಮಕಾಂಡ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ 2.7 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿಯಿವೆ. ಕೆಪಿಎಸ್‌ಸಿ ಅಧ್ಯಕ್ಷರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಅಲ್ಲಿಯೂ ಪ್ರತಿಭಟನೆಗಿಳಿದ ಪರೀಕ್ಷಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ. ಹಾಗಿದ್ದರೂ ರಾಹುಲ್ ಅದೇಕೆ ಮೌನ ವಹಿಸಿದ್ದರು. ಅಲ್ಲೇಕೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಾಥ್ ಕೊಡಲಿಲ್ಲ? ಇದು ಇವರ ದ್ವಿಮುಖ ನೀತಿಯನ್ನೇ ಅನಾವರಣಗೊಳಿಸಿದೆ ಎಂದು ಕಿಡಿಕಾರಿದರು.

ಪರೀಕ್ಷಾ ಮಾಫಿಯ ವಿರುದ್ಧ ಕಠಿಣ ಕ್ರಮ: 
ನೀಟ್ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವತ್ತೂ ನೆಪ ಹೇಳಿ ಜಾರಿಕೊಂಡಿಲ್ಲ. ವ್ಯವಸ್ಥೆ ಸುಧಾರಿಸಲು ಪ್ರಥಮಾದ್ಯತೆ ನೀಡಿದೆ. ನೀಟ್ ಪ್ರಕರಣದಲ್ಲಿ ಈಗಾಗಲೇ 14 ಜನರನ್ನು ಬಂಧಿಸಲಾಗಿದೆ. ಪರೀಕ್ಷಾ ಮಾಫಿಯಾಗೆ 10 ವರ್ಷ ಜೈಲು ಮತ್ತು ಭಾರೀ ದಂಡ ವಿಧಿಸುವ ಕಟ್ಟುನಿಟ್ಟಿನ ಕಾನೂನನ್ನು ಜಾರಿಗೆ ತಂದಿದೆ ಎಂದು ಕೇಂದ್ರದ ಕ್ರಮವನ್ನು ಸಮರ್ಥಿಸಿಕೊಂಡರು.

ರಾಜಸ್ಥಾನದಲ್ಲಿ ಮಾತ್ರ ಗೆಹ್ಲೋಟ್ ಅವರ ಅಧಿಕಾರಾವಧಿಯಲ್ಲಿ 19 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪ್ರಿಯಾಂಕಾ ವಾದ್ರಾ ಅವರು ಅಂದು ಅತ್ಯುತ್ತಮ ಪ್ರಯತ್ನದ ಹೊರತಾಗಿಯೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲ ಎಂಬುವುದನ್ನು ಸ್ವತಃ ಒಪ್ಪಿಕೊಂಡಿದ್ದರು ಎಂದರು.

ವೈದ್ಯಕೀಯ ಸೀಟು ಮೂರುಪಟ್ಟು ಹೆಚ್ಚಿದೆ: 
2014ರಿಂದ ನರೇಂದ್ರ ಮೋದಿ ಸರ್ಕಾರ, ಭಾರತದ ಯುವಕರು ಅರ್ಹತೆ ಆಧಾರದ ಮೇಲೆ ಮಾತ್ರ ಅವಕಾಶ ಪಡೆಯುವುದನ್ನು ಖಚಿತಪಡಿಸಿದೆ. ವೈದ್ಯಕೀಯ ಶಿಕ್ಷಣದಲ್ಲಿ ನಿರ್ವಹಣಾ ಕೋಟಾ ಸೀಟುಗಳ ವ್ಯವಸ್ಥೆ ರದ್ದುಗೊಳಿಸಿತು. ಆದರೆ, ವೈದ್ಯಕೀಯ ಸೀಟುಗಳ ಸಂಖ್ಯೆ 2014ರಲ್ಲಿ ಇದ್ದುದರ (51,000) ಮೂರು ಪಟ್ಟು ಇಂದು ಹೆಚ್ಚಾಗಿದೆ.  AIIMS ಸಂಖ್ಯೆಯನ್ನು ಗಮನಾರ್ಹವಾಗಿ ವಿಸ್ತರಿಸಲಾಗಿದೆ ಎಂದು ಉದಾಹರಣೆ ಸಮೇತ ಸ್ಪಷ್ಟಪಡಿಸಿದರು.

ರಚನಾತ್ಮಕ ವ್ಯವಸ್ಥೆಗೆ ಕೇಂದ್ರ ಬದ್ಧ:
ಪ್ರಸ್ತುತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಭವಿಸಿದೆ ಎಂದು ಗೊತ್ತಾಗುತ್ತಲೇ ಸರ್ಕಾರ ಪರೀಕ್ಷೆಯನ್ನೇ ರದ್ದುಗೊಳಿಸಿತು. ತದನಂತರ ಅತ್ಯಂತ ಪಾರದರ್ಶಕ ರೀತಿಯಲ್ಲಿ ಮರು-ನೀಟ್ ಪರೀಕ್ಷೆ ನಡೆಸಿತು ಮತ್ತು ಫಲಿತಾಂಶ ಸಹ ತಕ್ಷಣವೇ ಘೋಷಿಸಲಾಯಿತು. ದೇಶದಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು, ರಚನಾತ್ಮಕ ಸಲಹೆ ಕಾರ್ಯಗತಗೊಳಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಪುನರುಚ್ಚರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್