LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಇಂದು ಎಸ್ಐಟಿ ವಿಚಾರಣೆಗೆ ಹಾಜರಾಗ್ತಾರಾ ಭವಾನಿ ರೇವಣ್ಣ?

ಬೆಂಗಳೂರು: ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಶಾಸಕ ಹೆಚ್​. ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ವಿಚಾರಣೆಗೆ ಶನಿವಾರ ವಿಶೇಷ ತನಿಖಾ ತಂಡ (ಎಸ್ಐಟಿ) ತೆರಳಲಿದೆ. ಈ ಸಂಬಂಧ ಮೈಸೂರಿನ ಕೆ. ಆರ್. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಸಂತ್ರಸ್ತೆ ಅಪಹರಣ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಲಿದೆ. ಪ್ರಕರಣದಲ್ಲಿ ನಿಮ್ಮ ವಿಚಾರಣೆ ಅಗತ್ಯವಿದ್ದು, ಇಂದು (ಜೂನ್ 1) ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗಿನ ಅವಧಿಯಲ್ಲಿ ನೀವು ತಿಳಿಸಿರುವ ವಿಳಾಸಕ್ಕೆ ತನಿಖಾಧಿಕಾರಿಗಳು ಬರುತ್ತಿದ್ದಾರೆ. ಆ ಸಂದರ್ಭದಲ್ಲಿ ತಾವು ಹಾಜರಿರಬೇಕು ಎಂದು ಶುಕ್ರವಾರ 2ನೇ ನೋಟಿಸ್ ಮೂಲಕ ಎಸ್​ಐಟಿ ತಿಳಿಸಿತ್ತು. ವಿಚಾರಣೆ ನಡೆಸಲು ಎಸ್ಐಟಿ ತನಿಖಾಧಿಕಾರಿ ಹೇಮಂತ್ ಕುಮಾರ್ ನೇತೃತ್ವದ ತಂಡ ಹಾಸನದ ಹೊಳೆನರಸೀಪುರದಲ್ಲಿರುವ ಭವಾನಿ ಅವರ ಚೆನ್ನಾಂಬಿಕಾ ನಿವಾಸಕ್ಕೆ ತೆರಳಲಿದೆ.


ಮಹಿಳಾ ಸಿಬ್ಬಂದಿಯನ್ನೊಳಗೊಂಡ ಎಸ್ಐಟಿ ತನಿಖಾ ತಂಡ ಹೊಳೆನರಸೀಪುರಕ್ಕೆ ತೆರಳಲಿದ್ದು, ವಿಚಾರಣೆ ನಡೆಸಲಿದೆ. ಈಗಾಗಲೇ ಭವಾನಿ ರೇವಣ್ಣ ಅವರು ತಮ್ಮ ಬಂಧನವಾಗದಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಶುಕ್ರವಾರ ವಜಾಗೊಂಡಿದೆ. ಈ ನಡುವೆ ಭವಾನಿ ರೇವಣ್ಣ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗುತ್ತಿದ್ದು, ಇಂದಿನ ವಿಚಾರಣೆಗೆ ಗೈರಾದರೆ ಯಾವುದೇ ಕ್ಷಣದಲ್ಲಿಯಾದರೂ ಬಂಧಿಸುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ