LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೊಪ್ಪಳವನ್ನು ಗೆಲ್ಲಿಸಿ: ಸಿವಿಸಿ ಕರೆ



ಕೊಪ್ಪಳ: ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಜನತಾ ಪ್ರೇಮಿಯರ್ ಲೀಗ್ (ಜೆಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗುವ ಮೂಲಕ  ರಾಜ್ಯಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರಬೇಕೆಂದು 'ಅಂಜನಾದ್ರಿ ಫೈಟರ್ಸ್' ತಂಡದ ಆಟಗಾರರಿಗೆ
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಕರೆ ಕೊಟ್ಟರು.

ಬುಧವಾರ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಕೊಪ್ಪಳ ಜಿಲ್ಲೆಯ ಜೆಡಿಎಸ್ ತಂಡ  'ಅಂಜನಾದ್ರಿ ಫೈಟರ್ಸ್' ಜರ್ಸಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

"ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾದ ಹೆಚ್ ಡಿ ದೇವೇಗೌಡ ಅವರ ಜನ್ಮ ದಿನಾಚರಣೆ ಹಾಗೂ ಪಕ್ಷದ ರಜತ ಮಹೋತ್ಸವದ ಅಂಗವಾಗಿ ರಾಜ್ಯಮಟ್ಟದ ಜನತಾ ಪ್ರೇಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಬೆಂಗಳೂರಿನ  ಮಾದಾವರದ ನೈಸ್ ಗ್ರೌಂಡ್ ನಲ್ಲಿ ಇದೇ 15, 16 ಹಾಗೂ17ರಂದು ಆಯೋಜಿಸಲಾಗಿದೆ. ಕೊಪ್ಪಳ ಸೇರಿದಂತೆ ಒಟ್ಟು 26 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಟ್ರೋಫಿ ಗೆಲ್ಲುವ ಮೂಲಕ ಕೊಪ್ಪಳಕ್ಕೆ ಕೀರ್ತಿ ತರಬೇಕು," ಎಂದು ಹೇಳಿದರು.

ಒಟ್ಟು 16 ಆಟಗಾರರನ್ನು ಒಳಗೊಂಡ ತಂಡ ಕೊಪ್ಪಳ ಜಿಲ್ಲಾ ಜೆಡಿಎಸ್ ಘಟಕವನ್ನು ಪ್ರತಿನಿಧಿಸುತ್ತಿದೆ. ಜಿಲ್ಲೆಯ ಕ್ರೀಡಾ ಘಟಕದ ಅಧ್ಯಕ್ಷರಾದ ಸೈಯದ್ ಮಹೇಮೂದ್ ಹುಸೇನಿ ಬಲ್ಲೆ ಅಂಜನಾದ್ರಿ ಫೈಟರ್ಸ್ ತಂಡದ ನಾಯಕತ್ವ ವಹಿಸಲಿದ್ದಾರೆ. ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಹಾಗೂ ಯುವ ಘಟಕಗಳು ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸಿವೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಮ್ಮ ತಂಡ ಬಲಶಾಲಿಯಾಗಿದ್ದು ಚಾಂಪಿಯನ್ ಆಗುವ ವಿಶ್ವಾಸವಿದೆ ಎಂದು ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ ಹೇಳಿದರು.

ಸಿ ವಿ ಚಂದ್ರಶೇಖರ್ ಅವರು ನಮ್ಮ ತಂಡದ ಪ್ರಾಯೋಜಕತ್ವ ವಹಿಸಿದ್ದಾರೆ. ತಂಡದ ಎಲ್ಲಾ ಆಟಗಾರರು ಪಕ್ಷದ ಸದಸ್ಯತ್ವ ಪಡೆದಿದ್ದಾರೆ. ಟ್ರೋಫಿ ಮತ್ತು 5 ಲಕ್ಷ ರೂಪಾಯಿ ನಗದು ಪುರಸ್ಕಾರ ಗೆದ್ದು ಚಾಂಪಿಯನ್ ಹಾಗೆ ಹೊರಹೊಮ್ಮುತ್ತೇವೆ. ಆ ಮೂಲಕ ಯುವಕರನ್ನು ದೊಡ್ಡ ಪ್ರಮಾಣದಲ್ಲಿ ಪಕ್ಷಕ್ಕೆ ಆಕರ್ಷಿಸುತ್ತೇವೆ ಎಂದು  ಸೈಯದ್ ಮಹೇಮೂದ್ ಹುಸೇನಿ ಬಲ್ಲೆ ಹೇಳಿದರು.

ಜಿಲ್ಲಾ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಅಹಮದ್, ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ನಗರ ಘಟಕ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಕೋಲ್ಕಾರ್, ತಾಲೂಕು ಎಸ್ ಸಿ ಘಟಕದ ಅಧ್ಯಕ್ಷ ಸುರೇಶ ದದೇಗಲ್, ತಾಲೂಕು ಎಸ್ ಟಿ ಘಟಕದ ಅಧ್ಯಕ್ಷ ಮಲ್ಲಪ್ಪ ಹಂದ್ರಾಳ, ಜಿಲ್ಲಾ ಖಜಾಂಚಿ ಮೌನೇಶ್ ಕಿನ್ನಾಳ, ದ್ಯಾಮಣ್ಣ ಕಲಕೇರಿ, ಮುತ್ತಣ್ಣ ಕಲಕೇರಿ, ರೋಹಿತ್ ಹಣವಾಳ, ಕಲಿಲ್ ಮಾನ್ವಿ  ಹಾಗೂ ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್