LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ :  ಮಾಜಿ ಸಚಿವ ಕೆ. ಎಸ್  ಈಶ್ವರಪ್ಪ 

ಬಳ್ಳಾರಿ, ಏ.24.: ಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಒಂದು ಕಡೆ, ಡಿಸಿಎಂ ಒಂದು ಕಡೆ ಈ ಇಬ್ಬರು  ಸಿಎಂ ಮತ್ತು ಡಿಸಿಎಂ ಗುಂಪು ಮಾಡಿಕೊಂಡು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ ಇತ್ತ ಉಪಮುಖ್ಯಮಂತ್ರಿ ಡಿಕೆಶಿ ಮುಖ್ಯಮಂತ್ರಿ ಪದವಿಗಾಗಿ ಶತ ಪ್ರಯತ್ನ ಮಾಡುತ್ತಾ ಕೇಂದ್ರದ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ ಇದೆಲ್ಲವನ್ನು ಗಮನಿಸುತ್ತಿದ್ದಾಗ  ಬರುವ ಮೂರ್ನಾಲ್ಕು ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ  ಬಹಳಷ್ಟು ಬದಲಾವಣೆ ಆಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
 ಖಾಸಗಿ ಕಾರ್ಯಕ್ರಮದ ನಿಮಿತ್ತ ಬಳ್ಳಾರಿಗೆ ಆಗಮಿಸಿದ್ದ ಅವರು ಇಂದು ನಗರದ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿ  ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಅನೇಕ ಮುಸ್ಲೀಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಪಕ್ಷದಿಂದ ಹೊರ ಹಾಕಿದ್ದಾರೆ. ಅದಕ್ಕೆ ಮುಸ್ಲಿ ಗುರುಗಳು ಅದನ್ನು ವಿರೋಧಿಸಿ ಎಚ್ಚರಿಕೆ ನೀಡಿದ್ದಾರೆ. ಇದನ್ನು ಪಕ್ಷದ ಮುಖಂಡರಾರು ಖಂಡಿಸಿಲ್ಲ.
ಮುಸ್ಲೀಂರು ಯುಪಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಬೇರೆ ಪಕ್ಷ ಬೆಂಬಲಿಸಿದ್ದಾರೆ. ಈಗ ನಡೆದಿರುವ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಅವಸಾನದ ದಿಕ್ಕಿನಲ್ಲಿ ಸಾಗಲಿದೆಂದರು.
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ಹಾಸ್ಯಾಸ್ಪದವಾಗಿವೆ. ಅವರು ದೇಶದ ಕ್ಷಮೆ ಕೇಳಬೇಕು ಎಂದ ಅವರು, ಮಹಿಳಾ ಮೀಸಲಾತಿ ಜಾರಿಗೆ ಕಾಂಗ್ರೆಸ್ ವಿರೋಧ ಮಾಡಿದ್ದು ಮಹಿಳೆಯರಿಗೆ ಮಾಡಿದ ಅಪಮಾನ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್