LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು: ಡಾ.ನಾಗಲಕ್ಷಿö್ಮÃ ಚೌಧರಿ



ಗದಗ,01: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ಜಿಲ್ಲೆಯ ಮಹಿಳೆಯರು ದೌರ್ಜನ್ಯ ರಹಿತರಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷಿö್ಮÃ ಚೌಧರಿ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಜಿಲ್ಲೆ ಇವರ ಸಹಯೋಗದೊಂದಿಗೆ ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2013 (  POSH ACT ) ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಮಹಿಳೆಯರ ಯಶಸ್ವಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪುರುಷರ ಸಹಕಾರವೂ ಅಗತ್ಯವಾಗಿತ್ತದೆ. ಮಹಿಳೆಯರು ತಮಗಾದ ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. POST ACT  ಗಿಂತ ಮೊದಲೇ ಸಾಕಷ್ಟು ಕಾನೂನು ಮಹಿಳಾ ಸಬಲೀಕರಣಕ್ಕಾಗಿ ಜಾರಿಗೊಂಡಿವೆ. ಹೆಣ್ಣುಮಕ್ಕಳಿಗೆ ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯವಾಗುತ್ತಿದ್ದರೆ POST ACT  ನಡಿ ರಚಿತವಾಗಿರುವ ಸಮಿತಿಗೆ ದೂರು ಕೊಟ್ಟು ಪರಿಹಾರ ಕಂಡುಕೊಳ್ಳಬಹುದು. POST ACT  ಅಧಿನಿಯಮ ಜಾರಿಯಾದ ಬಗೆಯನ್ನು ವಿವರಿಸಿದ ಅವರು ಕಾಯ್ದೆಯ ದುರ್ಬಳಕೆಯಾಗಬಾರದು ಎಂದು ಡಾ.ನಾಗಲಕ್ಷಿö್ಮÃ ಚೌಧರಿ ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ ಕಾನೂನು ಸೇವಾ ಪ್ರಾದಿಕಾರದಿಂದ ವಿವಿಧ ಇಲಾಖೆಯ ಸಹಯೋಗದೊಂದಿಗೆ POSH  ACT ನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. POSH  ನ ಉದ್ದೇಶವನ್ನು ಎಲ್ಲರೂ ತಿಳಿದುಕೊಳ್ಳಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ತೊಂದರೆಯಾದರೆ ಅಲ್ಲಿಯೇ ಇರುವ ಕಮೀಟಿಗೆ ದೂರು ಕೊಡಬಹುದು. ಸಿವಿಲ್ ಕೋರ್ಟಗೆ ಇರುವ ಅಧಿಕಾರವೇ ಆ ಕಮೀಟಿಗೂ ಇರುತ್ತದೆ. ಈ ಕಾಯ್ದೆಯು ಸರ್ಕಾರಿ ಕ್ಷೇತ್ರವಲ್ಲದೇ ಖಾಸಗಿ, ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಸಂಬAಧಿಸಿದ್ದಾಗಿರುತ್ತದೆ. ಕಾಯ್ದೆಯ ಸದ್ಭಳಕೆಯಾಗಬಾರದು. ಒಂದು ವೇಳೆ ಕಾಯ್ದೆಯ ಉದ್ದೇಶಪೂರ್ವಕವಾದ ದುರ್ಬಳಕೆಯಾದರೆ ದೂರುದಾರರಿಗೂ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ಮಹಿಳೆಯರ ಸಬಲೀಕರಣಕ್ಕಾಗಿ PಔSಊ ಗಿಂತ ಮೊದಲೇ ಸಾಕಷ್ಟು ಕಾನೂನು ಬಂದಿವೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆಗಾಗಿ, ಮಾನವೀಯತೆ ಇಲ್ಲದೇ ಮಹಿಳಯರ ಮೇಲೆ ದಬ್ಬಾಳಿಕೆಯಾದಾಗ ಅಂತಹ ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. ಅನ್ಯಾಯ ಮತ್ತು ದೌರ್ಜನ್ಯವನ್ನು ಸಂಬವಿಸಿದಾಗ ಮೂಕವಿಸ್ಮಿತರಾಗಿ ಇದ್ದು ಸಹಿಸಿಕೊಳ್ಳುವುದು ಸಹ ತಪ್ಪು. ದೌರ್ಜನ್ಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಟಿ.ಎಸ್. ಚಂದ್ರಿಕಾ ಅವರು ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ -2013 ರ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ , ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್, ಸೇರಿದಂತೆ ಸಂಘ ಸಂಸ್ಥೆಯವರು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
 
ನಾಡಗೀತೆಯೊಂದಿಗೆ ಪ್ರಾರಂಭವಾದ ಕರ‍್ಯಕ್ರಮದಲ್ಲಿ ಮಲ್ಲಪ್ಪ ಹೊಸಳ್ಳಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ನಿರೂಪಣಾಧಿಕಾರಿ ಮಹಾಂತಸ್ವಾಮಿ ಪೂಜಾರ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್