LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ: ರಾಜ್ಯ ಸರ್ಕಾರ ಇದೀಗ ಅಧಿಸೂಚನೆ

ಬೆಂಗಳೂರು: ಗಿಗ್ ಕಾರ್ಮಿಕರ ಸಾಮಾಜಿಕ‌ ಭದ್ರತೆ ಕಲ್ಪಿಸುವ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ಅಧ್ಯಾದೇಶ, 2025ಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಇದೀಗ ಅಧಿಸೂಚನೆ ಹೊರಡಿಸಿದೆ.


ಈ ಸುಗ್ರೀವಾಜ್ಞೆಯಿಂದ ಪ್ಲಾಟ್‌ಫಾರ್ಮ್ ಆಧಾರಿತ ಸೇವೆಗಳಾದ ಸ್ವಿಗ್ಗಿ, ಜೊಮಾಟೊಗಳಲ್ಲಿ ಫುಡ್‌ ಡೆಲವರಿ ಮಾಡುವ, ರೈಡ್‌ ಶೇರಿಂಗ್‌ ಸೇವೆಗಳಾದ ಓಲಾ, ಉಬರ್‌, ರ್‍ಯಾಪಿಡೋ ಯಾತ್ರಿ ಇತ್ಯಾದಿ ಅಪ್ಲಿಕೇಷನ್ ಆಧಾರಿತ ಚಾಲಕರು, ಇ–ಕಾಮರ್ಸ್‌ ಸಂಸ್ಥೆಗಳಾದ ಅಮೆಜಾನ್‌, ಪ್ಲಿಪ್‌ಕಾರ್ಟ್‌, ಬಿಗ್‌ ಬಾಸ್ಕೆಟ್‌ ಮತ್ತಿತ್ತರ ಕ್ಷೇತ್ರಗಳಲ್ಲಿ ಪೂರ್ಣಕಾಲಿಕ ಅಥವಾ ಅರೆಕಾಲಿಕ ಡೆಲವರಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಕಾರ್ಮಿಕ ಕಾನೂನುಗಳಡಿ ಲಭ್ಯವಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆಯಲಿದ್ದಾರೆ.


ರಾಜ್ಯ ಸರ್ಕಾರ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯನ್ನು ರಚಿಸಬೇಕು. ಈ ಮಂಡಳಿಗೆ ಕಾರ್ಮಿಕ ಸಚಿವರು ಅಧ್ಯಕ್ಷರಾಗಿರಲಿದ್ದಾರೆ. ಮಂಡಳಿಯಲ್ಲಿ ಅಧ್ಯಕ್ಷರು ಸೇರಿ 9 ಮಂದಿ ಸದಸ್ಯರಿರಲಿದ್ದಾರೆ. ಸಂಗ್ರಹಕಾರರು ಅಥವಾ ವೇದಿಕೆಗಳು ತಮ್ಮಲ್ಲಿ ಕಾರ್ಯನಿರ್ವಹಿಸುತ್ತಿರುವ ಅಥವಾ ನೋಂದಾಯಿಸಿದ ಎಲ್ಲಾ ಗಿಗ್ ಕಾರ್ಮಿಕರ ದತ್ತಾಂಶವನ್ನು ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ನಲವತ್ತೈದು ದಿನಗಳೊಳಗಾಗಿ ನಿಯಮಿಸಬಹುದಾದಂಥ ವಿಧಾನದಲ್ಲಿ ಮಂಡಳಿಗೆ ಒದಗಿಸಬೇಕು. ಯಾವುದೇ ವೇದಿಕೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಥವಾ ನೋಂದಾಯಿಸಿದ ಎಲ್ಲಾ ವೇದಿಕೆ ಆಧಾರಿತ ಗಿಗ್ ಕಾರ್ಮಿಕರು ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ವಿದ್ಯುನ್ಮಾನದ ಮೂಲಕ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳಬೇಕು.


ಸರ್ಕಾರವು, ನೋಂದಾಯಿಸಿದ ವೇದಿಕೆ ಆಧಾರಿತ ಗಿಗ್ ಕಾರ್ಮಿಕರಿಗಾಗಿ ಕರ್ನಾಟಕ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಸಂಗ್ರಹಕಾರರು ಅಥವಾ ವೇದಿಕೆಗಳಿಂದ "ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಶುಲ್ಕ" ವೆಂದು ಕರೆಯುವ ಕ್ಷೇಮಾಭಿವೃದ್ಧಿ ಶುಲ್ಕವನ್ನು ವಿಧಿಸಬೇಕು. ಅಧ್ಯಾದೇಶವು ಜಾರಿಗೆ ಬಂದ ಆರು ತಿಂಗಳೊಳಗಾಗಿ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಪ್ರತಿಯೊಂದು ವಹಿವಾಟಿನಲ್ಲಿ ಪಾವತಿ ನೀಡಿಕೆಯ ಶೇಕಡಾ ಒಂದರಷ್ಟಕ್ಕೆ ಕಡಿಮೆಯಲ್ಲದ, ಆದರೆ, ಶೇಕಡಾ ಐದರಷ್ಟನ್ನು ಮೀರದಂತೆ ಕ್ಷೇಮಾಭಿವೃದ್ಧಿ ಶುಲ್ಕ ಸಂಗ್ರಹಿಸಲಾಗುವುದು. ಗಿಗ್‌ ಕಾರ್ಮಿಕರು ಅಪಘಾತದಿಂದ ಮರಣ ಹೊಂದಿದರೆ ಅಪಘಾತ ಪರಿಹಾರ ಮತ್ತು ಜೀವ ವಿಮೆ ಸೇರಿ ₹4 ಲಕ್ಷ ಮತ್ತು ₹2 ಲಕ್ಷ ಮೊತ್ತದ ಜೀವ ವಿಮೆ ಒದಗಿಸಲಾಗುವುದು.‌


ಕಡ್ಡಾಯ ಗ್ರಾಮೀಣ ಸೇವೆ ಸಡಿಲಗೊಳಿಸುವ ಸುಗ್ರೀವಾಜ್ಞೆ: ಗ್ರಾಮೀಣ ಸೇವೆ ಸಡಿಲಗೊಳಿಸುವ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧ್ಯಾದೇಶ, 2025ಕ್ಕೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್