Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.05 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ


ಬಳ್ಳಾರಿ,ಜೂ.04 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ‘ಪ್ರಕೃತಿಯಿಂದ ಪ್ರೇರಿತ-ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’ ಎಂಬ ಘೋಷವಾಕ್ಯದೊಂದಿಗೆ ಜೂ.05 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್., ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜೆ.ಎಂ.ತಿಪ್ಪೇಸ್ವಾಮಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಜಯನಗರ ವಿಭಾಗೀಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ ಸೇರಿದಂತೆ ಇತರರು ಭಾಗವಹಿಸುವರು.
ವಿಶೇಷ ಉಪನ್ಯಾಸಕರಾಗಿ ವಿ.ಶ್ರೀ.ಕೃ. ವಿಶ್ವವಿದ್ಯಾಲಯದ ಪ್ರಾಣಿಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ನಾಗಭೂಷಣ ವಿ.ಚರಂತಿಮಠ ಹಾಗೂ ವೀರಶೈವ ಕಾಲೇಜಿನ ಮಾಜಿ ಪ್ರಾಂಶುಪಾಲರು ಹಾಗೂ ಪ್ರಾಣಿಶಾಸ್ತç ವಿಭಾಗದ ಮುಖ್ಯಸ್ಥ ಜಿ.ಮನೋಹರ ಅವರು ಭಾಗವಹಿಸುವರು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಟಿ.ಎಂ. ಸಿದ್ದೇಶ್ವರ ಬಾಬು ಅವರು ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*