LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ದ್ಯಾಮಮ್ಮಾದೇವಿ ದೇವಸ್ಥಾನದ ಸಭಾ ಮಂಟಪ ಉದ್ಘಾಟನೆ

ಯರಗಟ್ಟಿ: ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಸಭಾ ಮಂಟಪಗಳ ನಿರ್ಮಾಣದಿಂದ ಸಾರ್ವಜನಿಕ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಭೆ-ಸಮಾರಂಭಗಳನ್ನು ಹಮ್ಮಿಕೊಳ್ಳಲು ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಸಮೀಪದ ಯರಝರ್ವಿ ಗ್ರಾಮದಲ್ಲಿ ಬುದವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಿರ್ಮಿಸಲಾದ ದ್ಯಾಮಮ್ಮಾದೇವಿ ದೇವಸ್ಥಾನದ ಸಭಾ ಮಂಟಪ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದಬೇಕು. ಸಭಾ ಮಂಟಪಕ್ಕೆ ಇನ್ನು ಬೇಕಾಗುವ ಮೂಲಭೂತ ಸೌಕರ್ಯ ಸೌಲಬ್ಯಗಳನ್ನು ಸಿಗ್ರದಲ್ಲಿ ಕಲ್ಪಿಸಲಾಗುವುದು ಎಂದು ಹೇಳಿದರು. 

ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರ ಕೊಡುಗೆ ಅನನ್ಯ ಎಂದು ಹೇಳಿದರು.

ಘೋಡಗೇರಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ, ಯಲ್ಲಾಲಿಂಗ ಮಠದ ಚಿದಾನಂದ ಸ್ವಾಮೀಜಿ, ಮುರಗಯ್ಯಸ್ವಾಮಿ ಹಿರೇಮಠ, ಜಿಪಂ ಎಇಇ ಎಚ್.ಎ.ಕದ್ರಾಪೂರ, ಬೆಮುಲ್ ನಿರ್ದೇಶಕ ಶಂಕರ ಇಟ್ನಾಳ, ಮುಖಂಡ ಪ್ರಕಾಶ ವಾಲಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ದೇವಸ್ಥಾನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸುರೇಶ ಮುರಗೋಡ, ಆರ್.ಕೆ.ಪಟಾತ, ಡಾ.ಎ.ಎಂ.ಶಂಕರಲಿಂಗಪ್ಪ, ಎಂ.ಬಿ.ಪೂಜೇರ, ಸಿದ್ದಪ್ಪ ಮಾಳಗಿ, ದುಂಡಪ್ಪ ಕೊಡೆಳ್ಳಿ, ಪ್ರಕಾಶ ಮುರಗೋಡ, ಅಶೋಕ ಗಡಮ್ಮನ್ನವರ, ಭೀಮಶಿ ಕಡಬಿ, ಮಹಾದೇವ ದಾಸಪ್ಪನ್ನವರ, ಪ್ರಕಾಶ ಲಿಂಗರಡ್ಡಿ, ಅರ್ಜುನ ದಳವಾಯಿ, ಬಸವರಾಜ ಹಾರುಗೊಪ್ಪ, ರಮೇಶ ದುಂಡಪ್ಪನವರ, ಸುಬಾಷ ಕಲ್ಲನ್ನವರ, ಬಸವರಾಜ ಕತ್ತಿ, ಸಿದ್ಧಾರೂಡ ಪುಜೇರ ಸೇರಿದಂತೆ ಮುಖಂಡರು, ಸಮಾಜದ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.
 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್