LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯೋಗದಿಂದ ದೇಹ-ಮನಸ್ಸೂ ಒಗ್ಗೂಡುತ್ತದೆ-ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ

ವಿಜಯಪುರ,ಜೂ.೨೨ : ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸು ಒಗ್ಗೂಡುತ್ತದೆ. ನಿತ್ಯ ಯೋಗ ಮಾಡುವುದರಿಂದ ಆರೋಗ್ಯ ಸುಧಾರಿಸಿಕೊಳ್ಳುವುದಲ್ಲದೆ, ಸದೃಢರಾಗಿ ಇರಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಹರೀಶ ಎ. ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಆರ್.ಕೆ.ಎಮ್ ಸಮೂಹ ಸಂಸ್ಥೆಗಳು, ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘದ ಸಹಯೋಗದಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವರ್ಷ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಯೋಗ ದಿನ ಆಚರಿಸಲಾಗುತ್ತಿದೆ. ನಿತ್ಯ ಯೋಗ ಮಾಡುವುದರಿಂದ ಯಾವುದೇ ರೋಗ-ರುಜಿನಗಳು ತಡೆಗಟ್ಟಬಹುದಾಗಿದೆ ಎಂದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ ಮಾತನಾಡಿ, ನಿತ್ಯ ಯೋಗ ಮಾಡುವುದು ಒಳ್ಳೆಯದು. ದಿನಾಲು ಯೋಗ ಮಾಡುವುದರಿಂದ ಎಲ್ಲರೂ ಆರೋಗ್ಯವಂತರಾಗಿ ಇರಬಹುದು ಎಂದರು.
ಆರ್‌ಕೆಎಂ ಸಮೂಹ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ  ರಿಯಾಯತಿ ದರದಲ್ಲಿ ಉಚಿತ ಸೇವೆ ಸಲ್ಲಿಸುತ್ತಿದ್ದೇವೆ. ಇದರ ಸದುಪಯೋಗ ಸಾರ್ವಜನಿಕರು  ಪಡೆದುಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ  ಹಾಗರಗಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಯೋಗ ತರಬೇತುದಾರರಾಗಿ ರಮೇಶ ದಿನ್ನಿ,  ಸಾವಿತ್ರಿ ಪಿ. ಜಲಗಾರ, ಯೋಗಾ ತರಬೇತುದಾರರು ಮತ್ತು ಶ್ರೀಕಾಂತ ಕುಲಕರ್ಣಿ, ಸ್ವಯಂ ಸೇವಕರು ಯೋಗಾಭ್ಯಾಸ ಹೇಳಿಕೊಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು, ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರುಗಳು, ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂದಿ ಮತ್ತು ಆರ್.ಕೆ.ಎಮ್ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಪಾಲ್ಗೊಂಡು ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ