LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯೋಗದಿAದ ರೋಗಮುಕ್ತ ಜೀವನ ಸಾಧ್ಯ: ಆಶಾಲತಾ


ಬಳ್ಳಾರಿ,ಜೂ.09: ಯೋಗ ಸನಾತನ ಋಷಿ ಪರಂಪರೆ ಮನುಕುಲಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದ್ದು, ಜೀವನದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಅಳವಡಿಸಿಕೊಳ್ಳುವುದರಿಂದ ರೋಗಮುಕ್ತ ಜೀವನ ಸಾಗಿಸಲು ಸಾಧ್ಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಆಶಾಲತಾ ಸೋಮಪ್ಪ ಅವರು ಹೇಳಿದರು.
ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಸೊಂವಾರ ಹಮ್ಮಿಕೊಂಡಿದ್ದ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಯೋಗ ಮತ್ತು ಸಹಜ ಜೀವನದ ಮಹತ್ವವನ್ನು ನಾವಿಂದು ಮರೆತಿದ್ದೇವೆ. ಆದರೆ ಪಾಶ್ಚಾತ್ಯರು ಇದನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿಯೇ ಯೋಗ ಇಂದು ವಿಶ್ವಮಾನ್ಯತೆ ಪಡೆದು ಎಲ್ಲೆಡೆ ಜನಪ್ರಿಯವಾಗುತ್ತಿದೆ. ನಾವು ಇನ್ನಾದರೂ ಎಚ್ಚೆತ್ತುಕೊಂಡು ಒತ್ತಡದ ಜೀವನದಲ್ಲಿ ದಿನಕ್ಕೆ ಒಂದು ಗಂಟೆಯನ್ನಾದರೂ ಯೋಗ- ಧ್ಯಾನಕ್ಕೆ ಮೀಸಲಿಡಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ನಿರ್ದೇಶಕ ಪ್ರೊ.ಎಚ್.ತಿಪ್ಪೇಸ್ವಾಮಿ ಅವರು ಮಾತನಾಡಿ, ಭಾರತ ಜ್ಞಾನ ಪರಂಪರೆಗೆ ಹೆಸರಾದ ದೇಶ. ಚರಕ, ಸುಶ್ರುತರಂಥ ಮಹಾಯೋಗಿಗಳು ಇಡೀ ವಿಶ್ವಕ್ಕೆ ಅಪೂರ್ವ ಆಯುರ್ವೇದ ವೈದ್ಯವಿಜ್ಞಾನವನ್ನು ಪರಿಚಯಿಸಿದ್ದಾರೆ. ಆದರೆ ಪ್ರಕೃತಿ ಚಿಕಿತ್ಸೆ ನಮ್ಮ ಆರೋಗ್ಯವನ್ನು ನಾವೇ ಅರ್ಥ ಮಾಡಿಕೊಂಡು ಜೀವನಶೈಲಿಯನ್ನು ಮಾರ್ಪಡಿಸಿಕೊಳ್ಳುವುದಕ್ಕೆ ಸಂಬAಧಿಸಿದ್ದು. ಉತ್ತಮ ಆಹಾರ- ವಿಹಾರ, ಆಚಾರ-ವಿಚಾರದೊಂದಿಗೆ ಶಿಸ್ತುಬದ್ಧ ಜೀವನಶೈಲಿಯನ್ನು ಅಳವಡಿಸಿಕೊಂಡು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ಆಸ್ಪತ್ರೆಯ ನಿರ್ದೇಶಕ ಮತ್ತು ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್ ಪಾದೇಕಲ್ ಅವರು ಮಾತನಾಡಿ, ಪಾಶ್ಚಾತ್ಯ ಜೀವನಶೈಲಿಯ ಅಂಧಾನುಕರಣೆಯಿAದ ಭಾರತದಲ್ಲಿ ಜೀವನಶೈಲಿ ರೋಗಗಳು ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿವೆ. ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ನಮಗೆ ನೀಡಿದ ಅನೇಕ ಅಂಶಗಳನ್ನು ನಾವಿಂದು ಮರೆತಿದ್ದೇವೆ. ಔಷಧ ರಹಿತವಾಗಿ ನಮ್ಮ ಜೀವನಶೈಲಿ ಮಾರ್ಪಡಿಸಿಕೊಳ್ಳುವ ಮೂಲಕ ಮರೆತ ಅಂಶಗಳನ್ನು ನಮಗೆ ಪ್ರಕೃತಿ ಚಿಕಿತ್ಸಾ ಪದ್ಧತಿ ನೆನಪಿಸುತ್ತಿದೆ. ಈ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಉತ್ತಮ ಆಹಾರ ಪದ್ಧತಿ ಅನುಸರಿಸುವ ಜೊತೆಗೆ ಯೋಗ, ಪ್ರಾಣಾಯಾಮ, ಧ್ಯಾನದಂಥ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ಜೀವನಶೈಲಿ ರೋಗಗಳು ಬಾರದಂತೆ ತಡೆಯಬಹುದು. ತುರ್ತು ಹಾಗೂ ಶಸ್ತçಚಿಕಿತ್ಸೆ ಹೊರತುಪಡಿಸಿ ಎಲ್ಲ ರೋಗಗಳಿಗೆ ಈ ಔಷಧಿ ರಹಿರ ವೈದ್ಯಪದ್ಧತಿಯಲ್ಲಿ ಚಿಕಿತ್ಸೆ ಇದ್ದು, ಇದರ ಪ್ರಯೋಜನ ಪಡೆದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ಭಾರತೀಯ ಆಹಾರ- ವಿಹಾರ, ಆಚಾರ- ವಿಚಾರಗಳು ಮನೋದೈಹಿಕ ಆರೋಗ್ಯಕ್ಕೆ ಪೂರಕ. ಮನಸ್ಸು ಮತ್ತು ದೇಹದ ಸಮತೋಲನ ಕಾಪಾಡಿಕೊಳ್ಳುವುದೇ ಉತ್ತಮ ಆರೋಗ್ಯದ ಗುಟ್ಟು ಎಂದು ಆಧುನಿಕ ವಿಜ್ಞಾನವೂ ಒಪ್ಪಿಕೊಳ್ಳುತ್ತದೆ ಎಂದರು.
ವಿವಿ ಕ್ರೀಡಾ ನಿರ್ದೇಶಕ ಡ.ಶಶಿಧರ ಕೆಲ್ಲೂರ್ ಅವರು ಮಾತನಾಡಿ, ತಕ್ಷಣಕ್ಕೆ ಶಮನ ನೀಡುವ ಅಲೋಪತಿ ವೈದ್ಯಪದ್ಧತಿಯ ಅಡ್ಡ ಪರಿಣಾಮಗಳ ಹಿನ್ನೆಲೆಯಲ್ಲಿ ಜನ ಇಂದು ಕೈಗೆಟುಕುವ ಮತ್ತು ಸಹಜ ಚಿಕಿತ್ಸಾ ವಿಧಾನವಾದ ಪ್ರಕೃತಿ ಚಿಕಿತ್ಸೆಯತ್ತ ವಾಲುತ್ತಿದ್ದಾರೆ. ಮಧ್ಯ ಕರ್ನಾಟಕದಲ್ಲೇ ಅತ್ಯುತ್ತಮ ಪ್ರಕೃತಿ ಸೌಲಭವನ್ನು ಇದೀಗ ಜನನಿ ಆಸ್ಪತ್ರೆ ಕಲ್ಪಿಸಿಕೊಟ್ಟಿದ್ದು, ಈ ಭಾಗದ ಜನತೆ ಇದರ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.
ಜನನಿ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಉದಯಶಂಕರ ಭಟ್, ಸ್ನಾತಕೋತ್ತರ ಕೇಂದ್ರದ ಸಹಾಯಕ ಕ್ರೀಡಾ ನಿರ್ದೇಶಕ ಶಿವರಾಮಪ್ಪ ರಾಗಿ, ಕ್ರೀಡಾ ಸಹಾಯಕ ಪಾಪಯ್ಯ ಕಣಿವೆಹಳ್ಳಿ ಉಪಸ್ಥಿತರಿದ್ದರು. ಡಾ.ಮಲ್ಲಯ್ಯ ಕಾರ್ಯಕ್ರಮ ನಿರೂಪಿಸಿದರು. 150ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್